ಮಡಿಕೇರಿ: ಕರ್ಣಂಗೇರಿ ಗ್ರಾಮದಲ್ಲಿನ ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವವು ಮೇ 2 ರಂದು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಸದಸ್ಯ ಹೆಚ್.ಎಸ್.ದೇವರಾಜ್ (ಮಣಿ) ತಿಳಿಸಿದ್ದಾರೆ.
ಮಡಿಕೇರಿ ನಗರದ ಪತ್ರಿಕಾಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 2 ರಂದು ಬೆಳಿಗ್ಗೆ 6 ಗಂಟೆಗೆ ದೇವಾಲಯದಲ್ಲಿ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, 6.30 ಗಂಟೆಗೆ ಗಣಪತಿ ಹೋಮ, 7.30ಕ್ಕೆ ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥ ಸ್ನಾನ ನಡೆಯಲಿದ್ದು, ಬೆಳಿಗ್ಗೆ 9.20ಕ್ಕೆ ಕಳಸ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾತಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಹಗಲು 11.45ಕ್ಕೆ ದೇವಿಯ ರಥೋತ್ಸವವು ದೇವಾಲಯದ ಆವರಣದ ಸುತ್ತಲೂ ನೆರವೇರಲಿದ್ದು, ನಂತರ ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ ಮತ್ತು ಮಂಗಳಾರತಿ ಜರುಗಲಿದೆ ಎಂದರು.
ಸರ್ಚ್ ಕೂರ್ಗ್ ಸುದ್ದಿ ಅಪ್‌ಡೇಟ್ಸ್
ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ
ಅಪರಾಹ್ನ 12 ಗಂಟೆಗೆ ಅನ್ನದಾನ, 12.30ಕ್ಕೆ ತಾಯಿಯ ದರ್ಶನ, ಸಂಜೆ 6 ಗಂಟೆಗೆ ದೇವಾಲಯದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ ಜರುಗಲಿದ್ದು, ರಾತ್ರಿ 9 ಗಂಟೆಗೆ ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.
ರಥ ಎಳೆಯಲು ಪುರುಷರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಜಾತ್ರೆಗಿಂತ ಎಂಟು ದಿನಗಳ ಮೊದಲು ವ್ರತಪಾಲನೆ ಮಾಡಬೇಕು. ಅಲ್ಲದೆ ಆ ದಿನ ದೇವಾಲಯದಲ್ಲಿ ತೀರ್ಥಸ್ನಾನ ಮಾಡಿ ಬಿಳಿಪಂಚೆ ಹಾಗೂ ಕೆಂಪು ಮೇಲು ಹೊದಿಕೆ ಧರಿಸಿವರಿಗೆ ಮಾತ್ರ ರಥ ಎಳೆಯಲು ಅವಕಾಶ ನೀಡಲಾಗವುದೆಂದು ಹೆಚ್.ಎಸ್.ದೇವರಾಜ್ ಹೇಳಿದರು.
ದೇವಾಲಯದ ಧರ್ಮದರ್ಶಿ ಗೋವಿಂದ ಸ್ವಾಮಿ ಮಾತನಾಡಿ, ಸುಮಾರು 5 ಸಾವಿರ ಭಕ್ತಾಧಿಗಳು ವಾರ್ಷಿಕೋತ್ಸವಕ್ಕೆ ಆಗಮಿಸುವ ನಿರೀಕ್ಷೆ ಇದ್ದು, ದೂರದಿಂದ ಬರುವ ಭಕ್ತಾಧಿಗಳಿಗೆ ತಂಗಲು ಸ್ಥಳದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಭಕ್ತರಾದ ಚುಮ್ಮಿ ದೇವಯ್ಯ ಮಾತನಾಡಿ, ಪ್ರತಿವರ್ಷವೂ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆಯುತ್ತಾರೆ. ಈ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಸದಸ್ಯ ಕೆ.ಎಂ.ತಾರಾಪ್ರಸಾದ್ ಉಪಸ್ಥಿತರಿದ್ದರು.
