ಮೇಕೇರಿಯ ಸ್ವಾಗತ ಯುವಕ ಸಂಘದಿಂದ ಶಾಲಾ ಮಕ್ಕಳಿಗೆ ಉಚಿತ ದಂತ ತಪಾಸಣೆ ಶಿಬಿರ

ಮೇಕೇರಿ: ಸ್ವಾಗತ ಯುವಕ ಸಂಘ (ರಿ) ಮೇಕೇರಿ ಇವರ ನೇತೃತ್ವದಲ್ಲಿ ಮೇಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ದಂತ ತಪಾಸಣೆ ನಡೆಸಲಾಯಿತು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ದಂತ ಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ॥ ದೀಪಾ ರವರು ಮಕ್ಕಳ ದಂತ ತಪಾಸಣೆ ನಡೆಸಿದರು. ಹಲ್ಲಿನ ಮಹತ್ವ, ಉಂಟಾಗಬಹದಾದ ಸಮಸ್ಯೆಗಳು, ಬ್ರಶ್ ಮಾಡುವ ವಿಧಾನಗಳ ಬಗ್ಗೆ ವೈದ್ಯರು ಮಕ್ಕಳಿಗೆ ಮಾಹಿತಿ ನೀಡಿದರು. ಹಲ್ಲಿನ ಗಂಭೀರ ಸಮಸ್ಯೆಯಿರುವ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ಕರೆ ತರುವಂತೆ ತಿಳಿಸಲಾಯಿತು.

Search Kodagu Widget
Official

ಸರ್ಚ್‌ ಕೂರ್ಗ್‌ ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ಮೇಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ದಂತ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಂಡರು. ಶಿಬಿರದಲ್ಲಿ ಸ್ವಾಗತ ಯುವಕ ಸಂಘದ ಅಧ್ಯಕ್ಷರಾದ ಟಿ.ಎನ್. ಉಮೇಶ್. ಕಾರ್ಯದರ್ಶಿ ಪವನ್, ಖಜಾಂಚಿ ಭವನ್, ಕಾರ್ಯಕಾರಿ ಸಮಿತಿ ಸದಸ್ಯರಾದ ಲತೀ, ಗ್ರಾ.ಪಂ. ಸದಸ್ಯರಾದ ಸುಶೀಲಾ ಮಧು, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸಬಿತ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.ದಂತ ತಪಾಸಣೆಯ ನಂತರ ಶಾಲಾ ಮಕ್ಕಳಿಗೆ ಟೂತ್ ಬ್ರಶ್ ಹಾಗೂ ಟೂಥ್ ಪೇಸ್ಟ್ ಅನ್ನು ಉಚಿತವಾಗಿ ನೀಡಲಾಯಿತು.

0 0 votes
Article Rating
Subscribe
Notify of
guest
0 Comments
Newest
Oldest Most Voted
error: Content is protected !!
0
Would love your thoughts, please comment.x
()
x