ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ಹೆಸರು ನೋಂದಾಯಿಸಿ

Reading Time: 3 minutes

ಮಡಿಕೇರಿ ನ.17: ರೈತರ ಅನುಕೂಲಕ್ಕಾಗಿ ಫ್ರೂಟ್ಸ್ ತಂತ್ರಾಂಶವನ್ನು (ರೈತ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ-Farmer Registration and Unified Beneficiary Information System- FRUITS) ಸರ್ಕಾರದ ವತಿಯಿಂದ ಅಭಿವೃದ್ದಿಗೊಳಿಸಿದ್ದು, ಸರ್ಕಾರದಿಂದ ಸವಲತ್ತುಗಳನ್ನು ಪಡೆಯಲು ಬಯಸುವ ಎಲ್ಲಾ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಸೋಮಸುಂದರ್ ಅವರು ತಿಳಿಸಿದ್ದಾರೆ.

ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು ಗುರುತಿನ ಸಂಖ್ಯೆ (ಎಫ್‍ಐಡಿ) ಪಡೆಯಬಹುದು. ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಕಂದಾಯ ಇಲಾಖೆ ಮತ್ತು ಇತರೆ ಸಂಬಂಧಿಸಿದ ಇಲಾಖೆಗಳಿಂದ ದೊರೆಯುವ ಸಹಾಯಧನ ಸೌಲಭ್ಯ ಪಡೆಯಲು ಮತ್ತು ಬೆಂಬಲ ಬೆಲೆ, ಬೆಳೆ ವಿಮೆ, ಬೆಳೆ ಸಾಲ, ಬೆಳೆಹಾನಿ ಪರಿಹಾರ, ಬ್ಯಾಂಕ್ ಸಾಲ ಪಡೆಯಲು ಹಾಗೂ ಯೋಜನೆಗಳಿಗೆ ಫ್ರೂಟ್ಸ್ ಸಂಖ್ಯೆ ಬಳಸಲಾಗುತ್ತಿದ್ದು, ಈ ಯೋಜನೆಯ ಪ್ರಯೋಜನ ಪಡೆಯುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಕೋರಿದ್ದಾರೆ.

2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಸಂಭವಿಸಿರುವ ಬರ ಪರಿಸ್ಥಿತಿಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ 5 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರದ ವತಿಯಿಂದ ಘೋಷಣೆ ಮಾಡಲಾಗಿದೆ. ಈ ಸಂಬಂಧ ಸರ್ಕಾರದಿಂದ ಪರಿಹಾರ ಧನ ಬಿಡುಗಡೆಯಾದ ಸಂದರ್ಭದಲ್ಲಿ ರೈತರಿಗೆ ಅವರ ಫ್ರೂಟ್ಸ್ ಐಡಿ ಗೆ ಸೇರಿಸಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪರಿಹಾರ ಧನವನ್ನು ನೇರವಾಗಿ ಡಿಬಿಟಿ ಮೂಲಕ ವರ್ಗಾಯಿಸಲಾಗುತ್ತದೆ.
ಜಿಲ್ಲೆಯಲ್ಲಿ ಒಟ್ಟು 2,69,901 ಸರ್ವೇ ನಂಬರ್‍ಗಳು ಫ್ರೂಟ್ಸ್ ತಂತ್ರಾಂಶ ಸೇರ್ಪಡೆಯಾಗಬೇಕಾಗಿದ್ದು, ಇದರಲ್ಲಿ 1,31,218 ಸರ್ವೇ ನಂಬರ್‍ಗಳು ಫ್ರೂಟ್ಸ್ ತಂತ್ರಾಂಶದಲ್ಲಿ ಸೇರ್ಪಡೆಯಾಗಲು ಬಾಕಿ ಇರುತ್ತದೆ. ಆದ್ದರಿಂದ, ಎಲ್ಲಾ ರೈತರು ಕಡ್ಡಾಯವಾಗಿ ತಮ್ಮ ಎಲ್ಲಾ ಜಮೀನುಗಳ ವಿವರಗಳನ್ನು ತಮ್ಮ ಎಫ್‍ಐಡಿ ಗೆ ಸೇರಿಸಲು ಮತ್ತು ಯಾವ ರೈತರು ಇಲ್ಲಿಯವರೆಗೆ ಎಫ್‍ಐಡಿ ಯನ್ನು ಮಾಡಿಸಿಕೊಂಡಿಲ್ಲವೋ ಅವರು ತಮ್ಮ ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ, ಪಶು ಸಂಗೋಪನಾ ಇಲಾಖೆ, ರೇಷ್ಮೆ ಇಲಾಖೆಯನ್ನು ಸಂಪರ್ಕಿಸಲು ಕೋರಿದೆ.

WhatsApp Group Banner

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌

ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌

ವಾಟ್ಸಾಪ್ ಚಾನಲ್‌ ಫಾಲೋ ಮಾಡಿ

ಎಫ್‍ಐಡಿ ಯನ್ನು ಮಾಡಿಸಲು ತಮ್ಮ ಹೆಸರಿನಲ್ಲಿರುವ ಎಲ್ಲಾ ಜಮೀನುಗಳ ಪಹಣಿ ಪ್ರತಿಗಳು, ರೈತರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ತಮ್ಮ ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಪ್ರತಿ (ಪರಿಶಿಷ್ಟ ವರ್ಗದ ರೈತರಿಗೆ ಕಡ್ಡಾಯ) ಹಾಗೂ ಪಾಸ್‍ಪೋರ್ಟ್ ಅಳತೆಯ ಒಂದು ಭಾವಚಿತ್ರ ಈ ದಾಖಲಾತಿಗಳು ಕಡ್ಡಾಯವಾಗಿದ್ದು, ರೈತರು ಈ ದಾಖಲಾತಿಗಳನ್ನು ತಪ್ಪದೇ ತೆಗೆದುಕೊಂಡು ಹೋಗುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

✍️….ಕರ್ನಾಟಕ ವಾರ್ತೆ

ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x