Reading Time: < 1 minute
ವೃತ್ತಿಶಿಕ್ಷಣ ವಸ್ತುಪ್ರದರ್ಶನ; ಮೂರ್ನಾಡು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ
ಮೂರ್ನಾಡು: ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 2023-24ನೇ ಸಾಲಿನ ಜಿಲ್ಲಾ ಮಟ್ಟದ ಶೈಕ್ಷಣಿಕ ಮತ್ತು ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವದ ವಸ್ತು ಪ್ರದರ್ಶನದಲ್ಲಿ ಮೂರ್ನಾಡು ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮೂರ್ನಾಡು ಪ್ರೌಢಶಾಲೆಯ ವೃತ್ತಿ ಶಿಕ್ಷಕ ಹೆಚ್.ಬಿ. ಕೃಷ್ಣಪ್ಪ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುತ್ತಾರೆ.