Reading Time: < 1 minute
ಸಂಪಾಜೆ: ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಡಳಿತ ಮಂಡಳಿಯ ಅಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ಶ್ರೀ. ಅನಂತ್ ಊರುಬೈಲು ರವರು ಮತ್ತು ಉಪಾಧ್ಯಕ್ಷರಾಗಿ ಶ್ರೀ. ಯಶವಂತ ದೇವರಗುಂಡ ರವರು ಅವಿರೋಧವಾಗಿ ಆಯ್ಕೆಯಾದರು.
ಜನವರಿ.9 ರಂದು ಸಂಪಾಜೆಯ ಕೇಂದ್ರ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಶ್ರೀ. ಸಿದ್ದಲಿಂಗಮೂರ್ತಿ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಕಳೆದ 29-12-2024 ರಂದು ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಅನಂತ್ ಊರುಬೈಲು ನೇತೃತ್ವದಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ 13 ಅಭ್ಯರ್ಥಿಗಳು ಬಾರೀ ಅಂತರದಿಂದ ವಿಜಯ ಸಾದಿಸಿದ್ದರು.