Reading Time: < 1 minute
ಪೆರಾಜೆ ಪ್ರಾಥಮಿಕ ಕೃಷಿ ಪತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ 2024-25 ನೇ ಸಾಲಿನಲ್ಲಿ ಉತ್ತಮ ಆಡಳಿತ ಮತ್ತು ಕಾರ್ಯನಿರ್ವಹಣೆಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಥಮ ಸ್ಥಾನ ದೊರೆಕಿರುತ್ತದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಗಣಪತಿ ಇವರಿಂದ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರು, ಉಪಾಧ್ಯಕ್ಷರಾದ ಅಶೋಕ ಪಿ ಎಂ ಇವರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಇವರು ಪ್ರಶಸ್ತಿಯನ್ನು ಸ್ವೀಕರಿಸಿದರು.