Reading Time: 1 minute
ನಾಪೋಕ್ಲು : ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಕಾಡಿನೊಳಗೆ ಪಲ್ಟಿಯಾದ ಘಟನೆ ಪೇರೂರು ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ನಾಪೋಕ್ಲು ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೇರೂರು ಗ್ರಾಮದಿಂದ ಶಾಲಾ ಮಕ್ಕಳನ್ನು ಆಟೋದಲ್ಲಿ ಕರೆತರುವ ಸಂದರ್ಭ ಗ್ರಾಮದ ಮಂಜಾಟ್ ಎಂಬಲ್ಲಿ ರಸ್ತೆಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಅಪಘಾತ ದಿಂದ ಆಟೋ 15ಅಡಿ ಕಾಡಿನೊಳಗೆ ಉರುಳಿ ಬಿದ್ದಿದೆ. ಇದರಿಂದ ಚಾಲಕ ಹಾಗೂ ಆಟೋದಲ್ಲಿದ್ದ ಮೂರು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಳುಗಳನ್ನು ಸಾರ್ವಜನಿಕರು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಳಿಸಿದ್ದಾರೆ.
ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ: ಝಕರಿಯ ನಾಪೋಕ್ಲು