Reading Time: < 1 minute
ಚೆಯ್ಯ0ಡಾಣೆ, ಸೆ, 01: ನಾಪೋಕ್ಲು ಬಳಿಯ ಚೆರಿಯಪರಂಬು ಜನರಲ್ ಕೆ.ಎಸ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನರಿಯಂದಡ ಕೇಂದ್ರ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.
ಬಾಲಕ ಮತ್ತು ಬಾಲಕಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಹಾಗೂ ಬಾಲಕಿಯರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಜಯಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.
ದೈಹಿಕ ಶಿಕ್ಷಕರಾಗಿ ಪಿ.ಬಿ.ಪೊನ್ನಪ್ಪ ಹಾಗೂ ಬಿ.ಎಸ್.ಭವ್ಯ ಮುಖ್ಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ವರದಿ: ಸಿ.ಎ. ಅಶ್ರಫ್, ಚೆಯ್ಯಂಡಾಣೆ