ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ವತಿಯಿಂದ 50ನೇ ವರ್ಷದ ಸ್ವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನ ಪುರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಳು ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಸದಸ್ಯ ತುಳು ಭಾಷೆ, ಲಿಪಿ, ಆಚಾರ ವಿಚಾರಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲೆಯಲ್ಲಿ ತುಳು ಭಾಷೆಯನ್ನು ಪಸರಿಸುವಲ್ಲಿ ತನ್ನದೇ ಕೊಡುಗೆ ನೀಡಿರುವ ಪಿ.ಎಂ. ರವಿ ಮೊಗೇರ ಅವರ ಸಾಧನೆಯನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ 4ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸನ್ನಿಧಿ ಕಶೆಕೊಡಿ ಮತದಾನ ಜಾಗೃತಿಯಲ್ಲಿ ವಿಶೇಷ ಸಾಧನೆ ಮಾಡಿದ ಜಿಲ್ಲಾಡಳಿತ ಪ್ರಸಂಶಕ್ಕೆ ಒಳಪಟ್ಟ ಬಾಲಕಿಯನ್ನು ಸನ್ಮಾನಿಸಲಾಯಿತು.
Official
ಸರ್ಚ್ ಕೊಡಗು ಸುದ್ದಿ ಅಪ್‌ಡೇಟ್ಸ್
ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ
ಈ ಸಂದರ್ಭ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರು ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
