ಮೂರ್ನಾಡು: ವಾಲಿಬಾಲ್ ತಂಡದ ವಿದ್ಯಾರ್ಥಿನಿಯರು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಮೂರ್ನಾಡು: ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಾಲಿಬಾಲ್ ತಂಡದ ವಿದ್ಯಾರ್ಥಿನಿಯರು ವಿಭಾಗೀಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ಇತ್ತೀಚೆಗೆ ಮಡಿಕೇರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ ಶಾಲೆಯ 14 ವರ್ಷದ ಕೆಳಗಿನ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ವಿಭಾಗೀಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಶಾಲೆಯ ಮುಖ್ಯ ಶಿಕ್ಷಕಿ ವಿ.ಕೆ. ಲಲಿತ, ದೈಹಿಕ ಶಿಕ್ಷಕಿ ಪ್ರೇಮಲತ ಶೆಡ್ತಿ ಮತ್ತು ಶಾಲಾ ಹಿರಿಯ ಶಿಕ್ಷಕಿ ಬಿ.ಎನ್. ಪುಷ್ಪಾವತಿ ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ವಿಜೇತ ವಿದ್ಯಾರ್ಥಿಗಳೊಂದಿಗೆ ಇದ್ದಾರೆ.

Search Kodagu WhatsApp Community
Search Kodagu Updates
Official

ಸರ್ಚ್ ಕೊಡಗು ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

Search Kodagu

ಹಾಗೆಯೆ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ ಶಾಲಾ ಬಾಲಕಿಯರ ಕಾಲ್ಚೆಂಡು ಪಂದ್ಯಾಟದಲ್ಲಿ ಪ್ರಥಮ, ಬಾಲಕರು ಮತ್ತು ಬಾಲಕಿಯರ ಖೊಖೊ ಪಂದ್ಯಾಟದಲ್ಲಿ ಪ್ರಥಮ, ಮೇಲಾಟದಲ್ಲಿ ಬಾಲಕಿಯರ ರಿಲೆ ಪ್ರಥಮ, ಬಾಲಕಿಯರ 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ, 400 ಮೀಟರ್ ಓಟದಲ್ಲಿ ದ್ವಿತೀಯ, ಬಾಲಕರ 200 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ಬಾಲಕಿಯರ ಎತ್ತರ ಜಿಗಿತದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳನ್ನು ಪಡೆದು ಚಪ್ಪಂಡಡಿ ಸರ್ಕಾರಿ ಪ್ರಾಥಮಿಕ ಶಾಲೆಯು ನಾಪೋಕ್ಲುವಿನ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸುವ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆಂದು ದೈಹಿಕ ಶಿಕ್ಷಕಿ ಪ್ರೇಮಲತ ಶೆಡ್ತಿ ತಿಳಿಸಿದ್ದಾರೆ.

ವರದಿ: ಟಿ.ಸಿ. ನಾಗರಾಜ್, ಮೂರ್ನಾಡು

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x