Reading Time: < 1 minute
ವಿರಾಜಪೇಟೆ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ನಿನಾದ ಶಾಲೆಯ ಪ್ರಾಥಮಿಕ ಬಾಲಕರ ತಂಡ ಡಬಲ್ಸ್ ಹಾಗೂ ಸಿಂಗಲ್ಸ್ ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಹಾಗೆ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಡಬಲ್ಸ್ ಹಾಗೂ ಸಿಂಗಲ್ಸ್ ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ ಆಡಳಿತ ಅಧಿಕಾರಿಗಳು ಮುಖ್ಯೋಪಾಧ್ಯಾಯರು ಶಿಕ್ಷಕರು ಜಯಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ವರದಿ: ಚಮ್ಮಟಿರ ಪ್ರವೀಣ್ ಉತ್ತಪ್ಪ