ಮೂರ್ನಾಡು ಪಟ್ಟಣದಲ್ಲಿ ಅದ್ಧೂರಿ ಆಯುಧ ಪೂಜಾ ಸಮಾರಂಭಕ್ಕೆ ವಿಶೇಷ ತಯಾರಿ

Reading Time: 5 minutes

ಮೂರ್ನಾಡು: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ನೂತನ ಆಡಳಿತಯು ಮೂರ್ನಾಡು ಪಟ್ಟಣದಲ್ಲಿ ಅದ್ಧೂರಿ ಆಯುಧ ಪೂಜಾ ಸಮಾರಂಭಕ್ಕೆ ವಿಶೇಷ ತಯಾರಿ ನಡೆಸುತ್ತಿದೆ.

WhatsApp Group Banner

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌

ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌

ವಾಟ್ಸಾಪ್ ಚಾನಲ್‌ ಫಾಲೋ ಮಾಡಿ

ಇತ್ತೀಚಿಗೆ ನಡೆದ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಮಹಾಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಕರವಂಡ ಕೆ. ಸಜನ್ ಗಣಪತಿ ಆಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಬಿ.ಬಿ. ಅಶ್ವಥ್ ರೈ, ಗೌರವಾಧ್ಯಕ್ಷರಾಗಿ ಎನ್.ಕೆ. ಕುಂಞರಾಮ, ಕಾರ್ಯದರ್ಶಿಯಾಗಿ ಎನ್.ಎನ್. ಶರಣು, ಖಜಾಂಚಿಯಾಗಿ ಹೆಚ್.ಹೆಚ್. ಜಯಂತ್ ಕುಮಾರ್ ಹಾಗೂ 20 ನಿರ್ದೇಶಕರುಗಳು ನೂತನ ಆಡಳಿತ ಮಂಡಳಿಗೆ ಆಯ್ಕೆಯಾಗಿರುತ್ತಾರೆ.

ಅದ್ದೂರಿ ಆಯುಧ ಪೂಜಾ ಸಮಾರಂಭ: ಇಲ್ಲಿನ ಪಾಂಡಾಣೆ ಶಾಲಾ ಮೈದಾನದಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ಅಲಂಕೃತ ವೇದಿಕೆಯಲ್ಲಿ 30ನೇ ವರ್ಷದ ಆಯುಧ ಪೂಜೆಯ ಸಂಭ್ರಮಾಚರಣೆ ದಿನಾಂಕ 23ರಂದು ಸೋಮವಾರ ನಡೆಯಲಿದೆ.

ಮೂರ್ನಾಡು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಯೋಜಿಸಲಾಗಿರುವ ವಿಜೃಂಭಣೆಯ ಆಯುಧ ಪೂಜಾ ಕಾರ್ಯಕ್ರಮವು ಅಪರಾಹ್ನ 2.00 ಅಲಂಕೃತ ವಾಹನಗಳಿಗೆ ಸಾಮೂಹಿಕ ಪೂಜೆಯೊಂದಿಗೆ ಪ್ರಾರಂಭಗೊಂಡು, ನಂತರ ಮುಖ್ಯ ರಸ್ತೆಯಲ್ಲಿ ಅಲಂಕೃತ ವಾಹನಗಳ ಮೆರವಣಿಗೆ ನಡೆಯಲಿದೆ. ಮೆರವಣಿಗೆ ವೀಕ್ಷಿಸಲು ರಸ್ತೆಯ ಇಕ್ಕೆಲಗಳಲ್ಲಿ ಅದಾಗಲೆ ಜನರು ನೆರೆದಿರುತ್ತಾರೆ. ಮೆರವಣಿಗೆಯಲ್ಲಿ ಅಲಂಕೃತ ವಾಹನಗಳೊಂದಿಗೆ ಈ ಬಾರಿ ವಿಶೇಷವಾಗಿ ವಿಟ್ಲದ ಕಲಾ ರಸಿಕ ಆರ್ಟ್ಸ್ ಬೊಂಬೆ ಬಳಗದವರ ಬೊಂಬೆ ಕುಣಿತ ಮತ್ತು ವಾದ್ಯಗೋಷ್ಟಿ ಮೆರವಣಿಗೆಯ ಕಳೆಯನ್ನು ಮತ್ತಷ್ಟು ಹೆಚ್ಚಿಸಲಿದೆ.

ಸಂಜೆಯ ವೇಳೆಗೆ ಸ್ಥಳೀಯ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಮತ್ತು ಜನಪ್ರಿಯ ಝೀ ಕನ್ನಡ ವಾಹಿನಿಯ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವಿಜೇತ ರಾಹುಲ್ ರಾವ್ ಮತ್ತು ತಂಡದ ನೃತ್ಯ ಪ್ರದರ್ಶನ ಈ ಬಾರಿ ಆಯುಧ ಪೂಜಾ ಕಾರ್ಯಕ್ರಮದ ವಿಶೇಷವಾಗಿದೆ.

ನಂತರ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಕರವಂಡ ಕೆ. ಸಜನ್ ಗಣಪತಿ ವಹಿಸಲಿದ್ದು, ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್. ಕುಶನ್ ರೈ, ಉಪಾಧ್ಯಕ್ಷೆ ಬಿ.ಎಸ್. ರೇಖಾ ಬಾಲು, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ನ ವಿಜೇತ ರಾಹುಲ್ ರಾವ್, ಮೂರ್ನಾಡು ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷ ದಂಬೆಕೋಡಿ ಕೆ. ಸುಬ್ರಮಣಿ, ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|| ವಿಜಯ್ ಕುಮಾರ್, ಮೂರ್ನಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವಿ.ಕೆ. ಲಲಿತ, ಮೂರ್ನಾಡು ಹಿಂದೂ ರುದ್ರಭೂಮಿ ಅಧ್ಯಕ್ಷ ಬಿ.ಎಸ್. ಅರುಣ್ ರೈ, ಸಂಘದ ಗೌರವಾಧ್ಯಕ್ಷ ಎನ್.ಕೆ. ಕುಂಞರಾಮ, ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು, ಲಯನ್ಸ್ ಕ್ಲಬ್ ಅಧ್ಯಕ್ಷೆ ಬಡುವಂಡ ಬಿಂದ್ಯಾ ಬೋಪಣ್ಣ, ಕೊಡವ ಸಮಾಜ ಅಧ್ಯಕ್ಷ ನೆರವಂಡ ಅನೂಪ್ ಉತ್ತಯ್ಯ, ಗೌಡ ಸಮಾಜ ಅಧ್ಯಕ್ಷ ಪಾಣತ್ತಲೆ ಟಿ. ಹರೀಶ್, ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಮುಂಡಂಡ ಪವಿ ಸೋಮಣ್ಣ, ಅಯ್ಯಪ್ಪ ಯುವಕ ಮಂಡಳಿಯ ಅಧ್ಯಕ್ಷ ಕಂಬೀರಂಡ ಕೆ. ಸತೀಶ್ ಮುತ್ತಪ್ಪ, ಬಂಟರ ಸಂಘದ ಅಧ್ಯಕ್ಷ ಬಿ.ಕೆ. ಚಂದ್ರಶೇಖರ್ ರೈ, ಬೇತ್ರಿಯ ಗಣೇಶ ಉತ್ಸವ ಸಮಿತಿಯ ಅಧ್ಯಕ್ಷ ಮಂಡೇಟಿರ ಅನಿಲ್ ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದಲ್ಲಿ ಮೂರ್ನಾಡಿನ ನಿವೃತ್ತ ಸುಬೇದಾರ್ ಮೇಜರ್ ಬೈರಿಕುಂದಿರ ಉತ್ತಪ್ಪ, ನಿವೃತ್ತ ದೈಹಿಕ ಶಿಕ್ಷಕ ಅವರೆಮಾದಂಡ ಜಿ. ಗಣೇಶ್ ಮತ್ತು ಬಲಮುರಿಯ ನಿವೃತ್ತ ಕರ್ನಲ್ ತೊತ್ತಿಯಂಡ ಬಿ. ಸಬಿತ ಅವರುಗಳನ್ನು ಸಂಘದ ವತಿಯಿಂದ ಸನ್ಮಾನಿಸಲಾಗುವುದು. ಅಲಂಕೃತಗೊAಡ ದ್ವಿಚಕ್ರ, ತ್ರಿಚಕ್ರ, ನಾಲ್ಕು ಚಕ್ರ, ಆರು ಚಕ್ರ ವಾಹನಗಳು ಮತ್ತು ಅಂಗಡಿಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡಲಾಗುವುದು. ಸಾರ್ವಜನಿಕರಿಗೆ ರಾತ್ರಿ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಸಂಘದ ವತಿಯಿಂದ ಮಾಡಲಾಗಿದೆ. ಸಂಘದ ಆಡಳಿತ ಮಂಡಳಿ ಮತ್ತು ಸರ್ವ ಸದಸ್ಯರು ಕಾರ್ಯಕ್ರವನ್ನು ವ್ಯವಸ್ಥಿತವಾಗಿ ಆಯೋಜಿಸಲು ಶ್ರಮವಹಿಸುತ್ತಿದ್ದಾರೆ.

ವರದಿ: ಟಿ.ಸಿ. ನಾಗರಾಜ್, ಮೂರ್ನಾಡು

ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x