Reading Time: < 1 minute
ನಾಪೋಕ್ಲು : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ನಾಪೋಕ್ಲು ಮೂರ್ನಾಡು ಮುಖ್ಯರಸ್ತೆಯಲ್ಲಿ ಗುರುವಾರ ಸಂಜೆ ನಡೆದಿದೆ.
ಮೂರ್ನಾಡು ಕಡೆಯಿಂದ ನಾಪೋಕ್ಲುವಿಗೆ ತೆರಳುತ್ತಿದ್ದ ಬೈಕ್ ಹಾಗೂ ಹೊದ್ದೂರು ಮಾರ್ಗವಾಗಿ ಮೂರ್ನಾಡು ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ನಾಪೋಕ್ಲು ಮೂರ್ನಾಡು ಮುಖ್ಯರಸ್ತೆಯ ಕಬಡಕ್ಕೇರಿ ಮರಸೇತುವೆ ಬಳಿಯ ರಸ್ತೆ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಿಂದ ಬೈಕ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರ ಕಾಲಿಗೆ ಗಂಭೀರ ಗಾಯಗಳಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಹಾಗೂ ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿದೆ. ಗಾಯಗೊಂಡ ಇಬ್ಬರು ಯುವಕರನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.