ಕುಟ್ಟದಲ್ಲಿ ಜಿಲ್ಲಾ ಮಟ್ಟದ ಆಯುಷ್ಮಾನ್ ಭವ ಕಾರ್ಯಕ್ರಮ: ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಮಡಿಕೇರಿ. ಸಮುದಾಯ ಆರೋಗ್ಯ ಕೇಂದ್ರ ಕುಟ್ಟ , ಗ್ರಾಮ ಪಂಚಾಯ್ತ ಕುಟ್ಟ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ: 21.11.2023 ರ ರಂದು ಸಮುದಾಯ ಆರೋಗ್ಯ ಕೇಂದ್ರ ಕುಟ್ಟದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

ಈ ಶಿಬಿರದಲ್ಲಿ ಈ ಕೆಳಕಂಡ ವಿಭಾಗಗಳಾದ ಸಾಮಾನ್ಯ ವೈದಶಾಸ್ತ್ರ, ಶಸ್ತ್ರ ಚಿಕಿತ್ಸೆ, ಕಣ್ಣು , ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವ್ಯೆದ್ಯಕೀಯ, ದಂತ, ಮಾನಸಿಕ ರೋಗ, ಆಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವ್ಯೆದ್ಯರು ವೈದ್ಯಕೀಯ ಸೇವೆಯನ್ನು ನೀಡಲಾಯಿತು. ಈ ಶಿಬಿರದಲ್ಲಿ ಸುಮಾರು 135ಕ್ಕಿಂತ ಹೆಚ್ಚು ಹೊರ ರೋಗಿಗಳ ವ್ಯೆದ್ಯರ ಭೇಟಿ, 06 UDID ಕಾರ್ಡ್ ಗಳು, 26 ಕ್ಕಿಂತ ಹೆಚ್ಚಿನ ಜನರು ಆಸಾಂಕ್ರಾಮಿಕ ರೋಗಗಳ ಪರೀಕ್ಷೆಯನ್ನು ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಕಲ್ಪಿಸಿಕೊಡಲಾಯಿತು ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ವ್ಯೆದ್ಯಕೀಯ ಕಾಲೇಜು ಮಡಿಕೇರಿಗೆ 33 ರೋಗಿಗಳನ್ನು ರೆಫರ್ ಮಾಡಲಾಗಿದೆ.

Search Kodagu Widget
Official

ಸರ್ಚ್‌ ಕೂರ್ಗ್‌ ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ಈ ಶಿಬಿರದಲ್ಲಿ ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆಯ ವತಿಯಿಂದ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ, ಉಚಿತ ಆಯುಷ್ಮಾನ್ ಕಾರ್ಡ್ ಗಳ ನೋಂದಣಿ, ಉಚಿತ UDID ನೋಂದಣಿ, ದೇಹದಾನ, ನೇತ್ರದಾನ, ಅಂಗಾಂಗ ದಾನ ಕುರಿತು ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಶ್ರೀ ಅಕ್ಷಯ್ ಆರೋಗ್ಯ ಮಿತ್ರರು ಮಾಹಿತಿಯನ್ನು ನೀಡಿದರು .

ಈ ಸಂದರ್ಭದಲ್ಲಿ ಮಕ್ಕಳ ವಿಭಾಗದ ಮುಖ್ಯಸ್ಥರದ ಡಾ. ಪುರುಷೋತ್ತಮ್, ENT ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀಕಾಂತ್, ಕೀಲು ಮೂಳೆ ವಿಭಾಗದ ಡಾ. ಪ್ರಶಾಂತ್ , ಸಾಮಾನ್ಯ ವ್ಯೆದ್ಯ ವಿಭಾಗದ ಡಾ. ವಿನಾಯಕ, ಕಣ್ಣಿನ ವಿಭಾಗದ ಡಾ. ಕಿರಣ್ ಭಟ್,ಸಮುದಾಯ ವೈದ್ಯಶಾಸ್ತ್ರದ ಡಾ. ನರಸಿಂಹ ಹಾಗೂ ವ್ಯೆದ್ಯಕೀಯ ಕಾಲೇಜಿನ ವ್ಯೆದ್ಯರು, ವ್ಯೆದ್ಯಾಕೀಯ ವಿದ್ಯಾರ್ಥಿಗಳು, ಅರೆ ವ್ಯೆದ್ಯಕೀಯ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಸಮುದಾಯ ಆರೋಗ್ಯ ಕೇಂದ್ರ ಕುಟ್ಟ ವ್ಯೆದ್ಯರು ಹಾಗೂ ಸಿಬ್ಬಂದಿಗಳು, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಿಬ್ಬಂದಿಗಳು, ಕುಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕುಟ್ಟ ವ್ಯಾಪ್ತಿಯ ಸಾರ್ವಜನಿಕರು, ರೋಗಿಗಳು ಭಾಗವಹಿಸಿದ್ದರು.

0 0 votes
Article Rating
Subscribe
Notify of
guest
0 Comments
Newest
Oldest Most Voted
error: Content is protected !!
0
Would love your thoughts, please comment.x
()
x