Reading Time: < 1 minute
ಮಡಿಕೇರಿ: ಮಡಿಕೇರಿ ಟೌನ್ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಸತೀಶ್ ಪೈ ಹಾಗೂ ಉಪಾಧ್ಯಕ್ಷರಾಗಿ ಕೆ.ಆರ್.ನಾಗೇಶ್ ಆಯ್ಕೆಯಾಗಿದ್ದಾರೆ.
ದಿನಾಂಕ: 10-01-2024ರ ಬುಧವಾರದಂದು ಬ್ಯಾಂಕ್ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಇಬ್ಬರು ಅವಿರೋಧವಾಗಿ ಆಯ್ಕೆಯಾದರು.
ಇತ್ತೀಚೆಗೆ ನಡೆದ ನಿರ್ದೇಶಕರ ಆಯ್ಕೆ ಚುನಾವಣೆ ಸಂದರ್ಭ ಬಿಜೆಪಿ ಬೆಂಬಲಿತರು ಬಹುಮತ ಪಡೆದಿದ್ದರು.
ಎರಡನೇ ಅವಧಿಗೆ ಅಧ್ಯಕ್ಷರಾಗಿ ಬಿ.ಎಂ. ರಾಜೇಶ್ ಹಾಗೂ ಉಪಾಧ್ಯಕ್ಷರಾಗಿ ಆರಾಧನ ಗಿರೀಶ್‌ರವರನ್ನು ಆಯ್ಕೆ ಮಾಡಲಾಗಿದೆ.