ಕುಂಜಿಲ ಕಕ್ಕಬ್ಬೆ ಗ್ರಾಮದ ಕೆಪಿ ಬಾಣೆ ಸರ್ಕಾರಿ ಶಾಲೆಯಲ್ಲಿ ನೂತನ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ -ಶಾಸಕ ಎ.ಎಸ್. ಪೊನ್ನಣ್ಣ

ನಾಪೋಕ್ಲು: ಜಗತ್ತಿನ ಬದಲಾವಣೆಗೆ ಅನುಗುಣವಾಗಿ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಹೇಳಿದರು.

Search Kodagu Widget
Official

ಸರ್ಚ್‌ ಕೂರ್ಗ್‌ ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮದ ಕೆ ಪಿ ಬಾಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಡಿಜಿಟಲ್ ಗ್ರಂಥಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈಗಿನ ಆಧುನಿಕ ಯುಗದಲ್ಲಿ ಡಿಜಿಟಲೀಕರಣ ಅತ್ಯವಶ್ಯಕ. ನಗರ ಪ್ರದೇಶಗಳಲ್ಲಿ ಡಿಜಿಟಲೀಕರಣಕ್ಕೆ ಯಾವುದೇ ಸಮಸ್ಯೆ ಇರುವುದಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಇದಕ್ಕೆ ಹೆಚ್ಚಿನ ಒತ್ತು ಕೊಡಬೇಕಾಗಿದೆ. ಡಿಜಿಟಲ್ ಜಗತ್ತಿನಲ್ಲಿ ಸಾಧಕ ಬಾದಕಗಳು ಕೂಡ ಇದೆ. ಅದರಲ್ಲಿ ಸಾಧಕಗಳನ್ನು ಆಯ್ಕೆಮಾಡಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕಾಗಿದೆ. ಸಾಮಾಜಿಕ ಜಾಲತಾಣಗಳಿಂದ ಹರಡುವ ತಪ್ಪು ಮಾಹಿತಿಯನ್ನು ದೂರ ಇಟ್ಟು ಒಳ್ಳೆಯದನ್ನು ಆಯ್ಕೆ ಮಾಡಿ ಉಪಯೋಗ ಪಡೆದುಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಅವರ ಮುಂದಿನ ಭವಿಷ್ಯ ಉಜ್ವಲವಾಗಲು ಎಲ್ಲಾ ರೀತಿಯ ಅವಕಾಶಗಳನ್ನು ಕಲ್ಪಿಸಿ ಕೊಡಬೇಕಾಗಿದೆ.ಅದರಂತೆ ಇಲ್ಲಿನ ಶಾಲೆಯ ಮಕ್ಕಳಿಗೆ ಡಿಜಿಟಲೀಕರಣಕ್ಕೆ ಒತ್ತು ನೀಡಿರುವುದು ಶ್ಲಾಘನೀಯ ಎಂದರು.ಮುಂದಿನ ದಿನಗಳಲ್ಲಿ ಇಲ್ಲಿನ ಮಕ್ಕಳು ಉನ್ನತ ಸ್ಥಾನವನ್ನು ಅಲಂಕರಿಸುವಂತ್ತಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದದಿಂದ ಶಾಸಕ ಪೊನ್ನಣ್ಣ ಅವರನ್ನು ಹಾಲುಹೊದಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಲೋಕೇಶ್, ಉಪಾಧ್ಯಕ್ಷೆ ಕಲಿಯಂಡ ಬೀನಾ, ಸದಸ್ಯರಾದ ಬಶೀರ್ ಪೊಯಕ್ಕರೆ,ಕುಂಡಂಡ ರಜಾಕ್,ಶಾಲೆಯ ಎಸ್ ಡಿಎಂ ಸಿ ಅಧ್ಯಕ್ಷೆ ಸಫಿಯ,ಶಾಲೆಯ ಮುಖ್ಯಶಿಕ್ಷಕಿ. ಪಿ.ಕೆ. ಗಂಗಮ್ಮ,ಮಾಜಿ ಗ್ರಾ. ಪಂ.ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಮಾಜಿ ಸದಸ್ಯ ಬಚಾಮಂಡ ಲವ ಚಿಣ್ಣಪ್ಪ, ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಹಾಜಿ ಕುಂಜಿಲ,ಕುಡಿಯರ ಮುತ್ತಪ್ಪ,ಶಾಲೆಯ ಎಸ್ ಡಿ ಎಂ ಸಿ ಸದಸ್ಯರು,ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು,ಶಾಲೆಯ ಶಿಕ್ಷಕ ವೃಂದ, ಪೋಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

0 0 votes
Article Rating
Subscribe
Notify of
guest
0 Comments
Newest
Oldest Most Voted
error: Content is protected !!
0
Would love your thoughts, please comment.x
()
x