ಸರ್ಚ್ ಕೊಡಗು ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್
ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿಸರ್ಚ್ ಕೊಡಗು ನಮ್ಮ ವಾಟ್ಸಾಪ್ ಚಾನಲ್ ಲಿಂಕ್
ವಾಟ್ಸಾಪ್ ಚಾನಲ್ ಫಾಲೋ ಮಾಡಿವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲು ತೀರ್ಮಾನ
ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಕುಂಜಿಲ ಪೈನರಿ ಮಖಾಂ ಉರೂಸ್ ಸಮಾರಂಭವು ಫೆ.7 ರಿಂದ 11ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದು ಪೈನರಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಸೌಕತ್ ಅಲಿ ತಿಳಿಸಿದ್ದಾರೆ.
ಕುಂಜಿಲ ಪೈನರಿ ಜಮಾಅತ್ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉರೂಸ್ ಸಮಾರಂಭ ಕಾರ್ಯಕ್ರಮದಲ್ಲಿ ಹಲವಾರು ಸಾಮಾಜಿಕ ಧಾರ್ಮಿಕ ಹಾಗೂ ರಾಜಕೀಯ ನೇತಾರರು ಭಾಗವಹಿಸಲಿದ್ದು ಜಾತಿ,ಧರ್ಮ, ಭೇದ ಮರೆತು ಸರ್ವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಜಮಾಅತ್ ಕಾರ್ಯದರ್ಶಿ ಸಹೀದ್ ಪಯ್ಯಡತ್ ಮಾತನಾಡಿ ಫೆ.7ರ ಶುಕ್ರವಾರ ಜುಮಾ ನಮಾಜಿನ ಬಳಿಕ ಪೈನರಿ ಸುನ್ನಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಎಂ.ಎ.ಸೌಕತ್ ಅಲಿ ದ್ವಜಾರೋಹಣ ನೆರವೇರಿಸುವ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಕುಂಜಿಲ ಮುದರ್ರಿಸ್ ನಿಝಾರ್ ಅಹ್ಸನಿ ಕಕ್ಕಡಿಪುರಂ ಅವರು ಪ್ರಾರ್ಥನೆಗೆ ನೇತೃತ್ವ ನೀಡಲಿದ್ದಾರೆ. ಅಂದು ರಾತ್ರಿ ಅಬ್ದುಲ್ ರಝಕ್ ಅಬ್ರಾರಿ ಧಾರ್ಮಿಕ ಪ್ರವಚನ ನಡೆಸಲಿದ್ದಾರೆ.
ಫೆ.8 ರಂದು ರಾತ್ರಿ ಸಮದ್ ಸಖಾಫಿ ಮತಪ್ರವಚನಕ್ಕೆ ನೇತೃತ್ವ ವಹಿಸಲಿದ್ದಾರೆ.
ಫೆ.9 ರಂದು ಕೇರಳದ ಪ್ರಖ್ಯಾತ ವಾಗ್ಮಿ ವಹ್ಹಾಬ್ ನಈಮಿ ಕೊಲ್ಲಂ ಧಾರ್ಮಿಕ ಪ್ರಭಾಷಣ ನಡೆಸಲಿದ್ದಾರೆ.
ಫೆ.10 ರಂದು ಮದ್ಯಾಹ್ನ 1.ಗಂಟೆಗೆ ಸೌಹಾರ್ದ ಸಮ್ಮೇಳನ ಕಾರ್ಯಕ್ರಮ ನಡೆಯಲಿದ್ದು ಕುಂಜಿಲ ಮುದರ್ರಿಸ್ ನಿಝಾರ್ ಅಹ್ಸನಿ ಕಕ್ಕಡಿಪುರಂ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೇರಳದ ಪ್ರಖ್ಯಾತವಾಗ್ಮಿ ಶಿರಾಜುದ್ದಿನ್ ಖಾಸಿಮಿ ಧಾರ್ಮಿಕ ಪ್ರಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕರ್ನಾಟಕ ಮುಸ್ಲಿಂ ಜಮಾಅತ್ ಅಧ್ಯಕ್ಷ ಅಬ್ದುಲ್ ಲತೀಫ್ ಸುಂಟಿಕೊಪ್ಪ,ಇಮ್ರಾನ್ ಸಿದ್ದಿಕಿ,ಅಕ್ಕಳತಂಡ ಮೊಯ್ದು,ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷ ಸೂಫಿ ಹಾಜಿ,ಕೆಪಿಸಿಸಿ ಸದಸ್ಯ ಯಾಕೂಬ್ ಸೇರಿದಂತೆ ವಿವಿಧ ಧಾರ್ಮಿಕ ಸಾಮಾಜಿಕ ಹಾಗೂ ರಾಜಕೀಯ ನೇತಾರರು ಭಾಗವಹಿಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆಯಲಿದೆ ಎಂದ ಅವರು
ಅಂದು ರಾತ್ರಿ ಸೌತ್ ಆಫ್ರಿಕಾದ ಶಬ್ಬೀರ್ ಬರಕಾತಿ ನೇತೃತ್ವದಲ್ಲಿ ಬೃಹತ್ ಬುರ್ದಾ ಆಲಾಪನೆ ನಡೆಯಲಿದೆ.
ಫೆ.11 ರಂದು ರಾತ್ರಿ ಸ್ವಲಾತ್ ವಾರ್ಷಿಕ ಮತ್ತು ದುಆ ಮಜ್ಲಿಸ್ ನಡೆಯಲಿದ್ದು ಮುಳ್ಳೂರ್ ಕರ ಮುಹಮ್ಮದಲಿ ಸಖಾಫಿ ಅವರು ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಸಯ್ಯದ್ ಶಿಹಾಬುದ್ದೀನ್ ಅಲ್ ಅಹ್ಹಲ್ ಮುತ್ತನ್ನೂರ್ ತಂಙಳ್ ದುಆ ಆಶೀರ್ವಚನಕ್ಕೆ ನೇತೃತ್ವ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ನಾಇಬ್ ಖಾಝಿ ಹಾಗೂ ಸಮಸ್ತ ಮುಶಾವರ ಸದಸ್ಯರಾದ ಅಬ್ದುಲ್ಲ ಫೈಝಿ ಎಡಪಾಲ ,ಕೂರ್ಗ್ ಜಂಇಯ್ಯತುಲ್ ಉಲಮಾ ಕೋಶಾಧಿಕಾರಿ ಹುಸೈನ್ ಸಖಾಫಿ ಎಮ್ಮೆಮಾಡು ಸೇರಿದಂತೆ ಮತ್ತಿತರರು ಪ್ರಮುಖರು ಭಾಗವಹಿಸಲಿದ್ದಾರೆ.
ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಉರೂಸ್ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಸಹೀದ್ ಕೋರಿದರು.
ಸುದ್ದಿಗೊಷ್ಟಿಯಲ್ಲಿ ಪೈನರಿ ಜಮಾಅತ್ ಕೋಶಾಧಿಕಾರಿ ಹಂಝ ಕುಂಡಂಡ,ಸಲಹಾ ಸಮಿತಿ ಸದಸ್ಯರಾದ ಪುದರೇಲ್ ಅಹ್ಮದ್ ಹಾಜಿ,ವಯಕೋಲ್ ಮೂಸ, ದರ್ಸ್ ಸಮಿತಿಯ ಅಧ್ಯಕ್ಷ ತರ್ಮಲ್ ಹಂಝ ಉಪಸ್ಥಿತರಿದ್ದರು.
ವರದಿ: ಅಶ್ರಫ್ ಚೆಯ್ಯಂಡಾಣೆ