Reading Time: 2 minutes
ಮಡಿಕೇರಿ: ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ‘25ನೇ ವರ್ಷದ ಮುದ್ದಂಡ ಕಪ್ ಹಾಕಿ ಉತ್ಸವ’ಕ್ಕೆ ಮಡಿಕೇರಿ ನಗರದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದೆ. ಪಂದ್ಯಾವಳಿಯು ಮಾ.28 ರಿಂದ ಏ.27ರ ವರೆಗೆ ಮೂರು ಮೈದಾನದಲ್ಲಿ ನಡೆಯಲಿದ್ದು, ದಾಖಲೆಯ 396 ತಂಡಗಳು ನೋಂದಣಿ ಮಾಡಿಕೊಂಡಿವೆ.
ಕಳೆದ ಬಾರಿಯ ಕುಂಡ್ಯೋಳಂಡ ಹಾಕಿ ಹಬ್ಬದಲ್ಲಿ 360 ತಂಡಗಳು ಪಾಲ್ಗೊಂಡಿದ್ದವು, ಈ ಬಾರಿಯ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ 396 ತಂಡಗಳು ಹೆಸರು ನೋಂದಾಯಿಸಿಕೊಂಡಿವೆ.
ಮಾ.28ರಂದು ಬೆಳಿಗ್ಗೆ 9ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ಮುಖ್ಯ ರಸ್ತೆಯ ಮೂಲಕ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನಕ್ಕೆ ಬೃಹತ್ ಮೆರವಣಿಗೆಯ ಮೂಲಕ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುವುದು.
ಮಾ.28ರಂದು ಉದ್ಘಾಟನೆಯ ಪ್ರದರ್ಶನ ಪಂದ್ಯವಾಗಿ ಕೊಡವ ಹಾಕಿ ಅಕಾಡೆಮಿ- X1 ಹಾಗೂ ಇತ್ತೀಚೆಗೆ ರಾಷ್ಟ್ರೀಯ ಮಟ್ಟದಲ್ಲಿ ವಿಜೇತರಾದ ಕರ್ನಾಟಕ- X1 ತಂಡಗಳ ನಡುವೆ ಸೆಣಸಾಟ ನಡೆಯಲಿದೆ.