ಸರ್ಚ್ ಕೊಡಗು ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್
ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿಸರ್ಚ್ ಕೊಡಗು ನಮ್ಮ ವಾಟ್ಸಾಪ್ ಚಾನಲ್ ಲಿಂಕ್
ವಾಟ್ಸಾಪ್ ಚಾನಲ್ ಫಾಲೋ ಮಾಡಿಬಿರುನಾಣಿ: ಬಿರುನಾಣಿಯಲ್ಲಿ ರೂ.25 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯಿತಿ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಉದ್ಘಾಟಿಸಿದರು.
ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಥಳೀಯ ಆಡಳಿತದಲ್ಲಿ ಗ್ರಾಮ ಪಂಚಾಯಿತಿಯು ಜನರ ಆದ್ಯತೆಯ ಮೇರೆಗೆ ಕೆಲಸ ಮಾಡುತ್ತದೆ. ಮುಂದೆಯೂ ಜನರಿಗೆ ಉತ್ತಮ ಆಡಳಿತವನ್ನು ನೀಡುವಂತಾಗಲಿ ಎಂದು ಹೇಳಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಮ್ಮತ್ತಿರ ರಾಜೇಶ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಚೆಪ್ಪುಡಿರ ಅರುಣ್ ಮಾಚಯ್ಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕರ್ತಮಾಡ ಮಂಜುಳಾ ಮೇದಪ್ಪ, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಪೊನ್ನಂಪೇಟೆ ತಾಲೂಕು ಬಗರ್ ಹುಕುಂ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಅಣ್ಣಳಮಾಡ ಲಾಲ ಅಪ್ಪಣ್ಣ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ, ದತಿ ಗ್ರಾಮ ಪಂಚಾಯತಿ ಸದಸ್ಯರಾದ ಬುಟ್ಟಿಯಂಡ ತಂಬಿ ನಾಣಯ್ಯ, ಬೊಟ್ಟಂಗಡ ಈಶ್ವರ, ಮಲ್ಲೇಂಗಡ ರೀನಾ, ಸರಸ್ವತಿ, ಹುದಿಕೇರಿ ಪಿಡಿಓ ಪುಟ್ಟರಾಜು, ಬಿರುನಾಣಿ ಪಿಡಿಓ ರವಿ ಮಟ್ಟರ್ ಕೋಡ್, ಪೊನ್ನಂಪೇಟೆ # ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್, ಬಿರುನಾಣಿ ವಲಯ ಕಾಂಗ್ರೆಸ್ ಅಧ್ಯಕ್ಷ ಕುಪ್ಪಣಮಾಡ ಪ್ರೀತಮ್ ಮುಂತಾದವರು ಹಾಜರಿದ್ದರು.