Deprecated: Creation of dynamic property Featured_Image_By_URL::$admin is deprecated in /home/u472122668/domains/searchcoorg.com/public_html/wp-content/plugins/featured-image-by-url/featured-image-by-url.php on line 56

Deprecated: Creation of dynamic property Featured_Image_By_URL::$common is deprecated in /home/u472122668/domains/searchcoorg.com/public_html/wp-content/plugins/featured-image-by-url/featured-image-by-url.php on line 57

Notice: Function _load_textdomain_just_in_time was called incorrectly. Translation loading for the push-notification domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/u472122668/domains/searchcoorg.com/public_html/wp-includes/functions.php on line 6131
ಮೂಕಚಂಡ ಟಿ. ಪ್ರಸನ್ನ ಸುಬ್ಬಯ್ಯ, ಸಹಕಾರಿಗಳು: ರುದ್ರುಗುಪ್ಪೆ. Rudraguppe - Search Coorg Media
Subscribe now OK No thanks
ಮೂಕಚಂಡ ಟಿ. ಪ್ರಸನ್ನ ಸುಬ್ಬಯ್ಯ, ಸಹಕಾರಿಗಳು: ರುದ್ರುಗುಪ್ಪೆ. Rudraguppe
Reading Time: 6 minutes

ಮೂಕಚಂಡ ಟಿ. ಪ್ರಸನ್ನ ಸುಬ್ಬಯ್ಯ, ಸಹಕಾರಿಗಳು: ರುದ್ರುಗುಪ್ಪೆ. Rudraguppe

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೆಶಕರಾಗಿ ಮೂಕಚಂಡ ಟಿ. ಪ್ರಸನ್ನ ಸುಬ್ಬಯ್ಯನವರು ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗೆ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿಯೂ ಕೂಡ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ.

WhatsApp Group Banner

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌

ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌

ವಾಟ್ಸಾಪ್ ಚಾನಲ್‌ ಫಾಲೋ ಮಾಡಿ

ತಮ್ಮ ತಂದೆಯವರ ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿನ ಕಾರ್ಯವೈಖರಿಗಳಿಂದ ಪ್ರೇರೇಪಣೆಗೊಂಡು ಸಾಮಾಜಿಕ ಸೇವೆ ಮಾಡುವ ನಿಟ್ಟಿನಲ್ಲಿ ಸಹಕಾರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡುತ್ತಾರೆ. ಕಂಡಂಗಾಲ ಸರಸ್ವತಿ ದವಸ ಭಂಡಾರದ ಕಾರ್ಯದರ್ಶಿಯಾಗಿ ಕಳೆದ 25ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಪ್ರಸ್ತುತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗೆ ಕಂಡಂಗಾಲದ ಲಕ್ಷ್ಮಿ ದವಸ ಭಂಡಾರದ  ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

2013ರಲ್ಲಿ ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ  ನಡೆದ  ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಗೊಂಡ ಮೂಕಚಂಡ ಟಿ. ಪ್ರಸನ್ನ ಸುಬ್ಬಯ್ಯನವರು, ಮೊದಲ ಬಾರಿಗೆ ನಿರ್ದೇಶಕರಾಗಿ ಸೇವೆ ಮತ್ತು 2018ರ ಚುನಾವಣೆಯಲ್ಲಿ ಆಯ್ಕೆಗೊಂಡು ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. 2023 ರಲ್ಲಿ ಮೂರನೇಯ ಬಾರಿ ಚುನಾವಣೆಯಲ್ಲಿ ಆಯ್ಕೆಗೊಂಡು ನಿರ್ದೇಶಕರಾಗಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ. ಹಾಗೆ ವಿರಾಜಪೇಟೆ ತಾಲ್ಲೂಕು ಸಹಕಾರ‌ ಯೂನಿಯನ್‌ನ ಅಧ್ಯಕ್ಷರಾಗಿ ಪ್ರಸ್ತುತ ಸೇವೆಸಲ್ಲಿಸುತ್ತಿದ್ದಾರೆ. ಶ್ರೀಯುತರು ಸರಿ ಸುಮಾರು 32 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

2020-21ರ ಸಾಲಿನಲ್ಲಿ ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 9.85 ಲಕ್ಷಗಳ ಲಾಭವನ್ನು ಗಳಿಸಿದ್ದು, ಶೇಕಡ 99% ಸಾಲ ಮರುಪಾವತಿಯಾಗಿದೆ ಎಂದು ಪ್ರಸನ್ನನವರು ತಿಳಿಸಿದರು. ಸಂಘದ ವತಿಯಿಂದ ಗೊಬ್ಬರ ಮಾರಾಟವು ದಾಖಲೆಯಾಗಿದ್ದು, ಜಾಮೀನು ಸಾಲ, ವಾಹನ ಸಾಲ, ಕೃಷಿಯೇತರ ಸಾಲ, ಮಧ್ಯಮಾವಧಿ ಸಾಲ, ಕೆಸಿಸಿ ಸಾಲ ಹಾಗೂ ಸಭಾಂಗಣದಿಂದ ಬಾಡಿಗೆ ರೂಪದ ಆದಾಯ ಇವುಗಳಿಂದಾಗಿ ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಲಾಭದ ಹಾದಿಯಲ್ಲಿ ಸಾಗುತ್ತಿದೆ ಎಂದು ಈ ಸಂದರ್ಭದಲ್ಲಿ  ತಿಳಿಸಿದರು.

ಸರಿ ಸುಮಾರು 50 ಲಕ್ಷ ವೆಚ್ಚದಲ್ಲಿ ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗೋದಾಮು, ಆಡಳಿತ ಕಚೇರಿ ಹಾಗೂ ಸಭಾಂಗಣ  ನಿರ್ಮಾಣ ಮಾಡಲಾಗಿದ್ದು, ಸಂಘದ ಆಡಳಿತ ವ್ಯವಸ್ಥೆಯನ್ನು ಸಂಪೂರ್ಣ ಡಿಜಿಟಲಿಕರಣ ಮಾಡುವ ಕಾರ್ಯವು ಪ್ರಗತಿಯಲ್ಲಿದೆ ಎಂದು ಪ್ರಸನ್ನನವರು ತಿಳಿಸಿದರು. ಶಾಸಕರ ನಿಧಿಯಿಂದ 5ಲಕ್ಷ ವೆಚ್ಚದಲ್ಲಿ ಸಂಘದ ಸುತ್ತಲಿನ ಆವರಣಗೊಡೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಹಾಗೆ ಸಂಘದ ಮೊದಲನೇ ಮಹಡಿಯಲ್ಲಿ ವಾಣಿಜ್ಯ ಸಂಕೀರ್ಣ ಹಾಗೂ ಆಡಳಿತ ಮಂಡಳಿಯ ಸಭಾಂಗಣ ಮಾಡುವ ಕ್ರೀಯಾ ಯೋಜನೆಯಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಕೊಡಗು ಡಿಸಿಸಿ ಬ್ಯಾಂಕಿನಿಂದ ಉತ್ತಮ ಕಾರ್ಯನಿರ್ವಹಣೆಗಾಗಿ ಬಹುಮಾನವನ್ನು ಪಡೆದುಕೊಂಡಿದೆ. ಜೊತೆಗೆ ಅಪೆಕ್ಸ್ ಬ್ಯಾಂಕಿನಿಂದಲೂ ಪ್ರಶಸ್ತಿ ಪಡೆದುಕೊಂಡಿದೆ ಎಂದ ಪ್ರಸನ್ನನವರು, ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಲಾಭವನ್ನು ಹೊಂದಿ ಪ್ರಗತಿಯತ್ತ ಸಾಗಲು ಸಂಘದ ಅಧ್ಯಕ್ಷರು, ಆಡಳಿತ ಮಂಡಳಿ, ಸದಸ್ಯರು, ಸಿಬ್ಬಂದಿಗಳು ಹಾಗೂ ಗ್ರಾಹಕರ ಸಹಕಾರ ಅತ್ಯುತ್ತಮವಾಗಿ ದೊರಕುತಿದೆ ಎಂದು ಈ ಸಂದರ್ಭದಲ್ಲಿ ಪ್ರಸನ್ನ ಸುಬ್ಬಯ್ಯನವರು, ತಿಳಿಸಿದರು.

ಸಹಕಾರ ಕ್ಷೇತ್ರಕ್ಕೆ ತನ್ನದೆ ಆದ ಇತಿಹಾಸವಿದ್ದು, ಪಾರದಶರ್ಕ ಆಡಳಿತ, ಸೇವಾ ಮನೋಭಾವನೆಯಿಂದ ಕೂಡಿದ ಸಹಕಾರಿಗಳು ಇದ್ದರೆ ಸಹಕಾರ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಹೊಂದುತ್ತದೆ ಎಂದ ಪ್ರಸನ್ನ ಸುಬ್ಬಯ್ಯನವರು, ಸರ್ಕಾರದ ಹಸ್ತಕ್ಷೇಪ ಸಹಕಾರ ಸಂಘಗಳಲ್ಲಿ ಪೂರ್ಣ ಮಟ್ಟದಲ್ಲಿ ಇರಬಾರದು ಹಾಗೆ ಸಹಕಾರ ಕ್ಷೇತ್ರವು ಸಹಕಾರ ಕ್ಷೇತ್ರವಾಗಿಯೇ ಉಳಿಯಬೇಕು ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.

ಸಹಕಾರಿ ಕ್ಷೇತ್ರಕ್ಕೆ ಹೆಚ್ಚು ಹೆಚ್ಚು ಯುವಶಕ್ತಿಯು ಪಾಲ್ಗೊಂಡು ಸೇವಾ ಮನೋಭಾವದಿಂದ ಸ್ವಾರ್ಥರಹಿತವಾಗಿ ಆತ್ಮತೃಪ್ತಿಯಿಂದ ಸೇವೆ ಸಲ್ಲಿಸಬೇಕು ಹಾಗೂ ಹಿರಿಯ ಸಹಕಾರಿಗಳಿಂದ ಸಲಹೆ ಸೂಚನೆಗಳನ್ನು ಪಡೆದು ಸಹಕಾರ ಕ್ಷೇತ್ರದ ಪ್ರಗತಿಗೆ ತಮ್ಮನ್ನು ತೊಡಿಗಿಸಿಕೊಳ್ಳಬೇಕು ಎಂದು ಸಹಕಾರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡುತ್ತಿರುವ ಭಾವಿ ಯುವಶಕ್ತಿಗೆ ಪ್ರಸನ್ನ ಸುಬ್ಬಯ್ಯನವರು, ತಮ್ಮ ಸಂದೇಶವನ್ನು ಈ ಸಂದರ್ಭದಲ್ಲಿ ನೀಡಿದರು.

ರಾಜಕೀಯ ಕ್ಷೇತ್ರದಲ್ಲಿ ಕಳೆದ 23 ವರ್ಷಗಳಿಂದ ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಪ್ರಸನ್ನ ಸುಬ್ಬಯ್ಯನವರು, ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗೆ ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಕಾರ್ಯಕರ್ತರಾಗಿದ್ದಾರೆ.

ವಿವಿಧ ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಾ ಸಾಮಾಜಿಕ ಕ್ಷೇತ್ರದಲ್ಲೂ ಸರಿ ಸುಮಾರು 23 ವರ್ಷಗಳಿಂದ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಧಾರ್ಮಿಕ ಕ್ಷೇತ್ರದಲ್ಲಿ ಹಲವಾರು ದೇವಾಲಯಗಳ ಸಮಿತಿಗಳಲ್ಲಿ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಶೈಕ್ಷಣಿಕ ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ತೊಡಗಿಸಿಕೊಂಡಿರುವ ಪ್ರಸನ್ನರವರು, ಕಂಡಗಾಲ ಪ್ರಾಥಮಿಕ ಶಾಲಾ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ, ಕ್ರೀಡಾ ಸಮಿತಿ ನಿರ್ದೆಶಕರಾಗಿ, ಕುತ್ತುನಾಡು ಹಾಗೂ ಬೇರಳಿನಾಡು ಹೈಸ್ಕೂಲ್‌ನ ನಿರ್ದೇಶಕರಾಗಿ,  ಶೈಕ್ಷಣಿಕ ಕ್ಷೇತ್ರದಲ್ಲೂ ಸೇವೆ ಸಲ್ಲಿಸುತ್ತಿದ್ದಾರೆ.

ಮೂಕಚಂಡ ಟಿ. ಪ್ರಸನ್ನ ಸುಬ್ಬಯ್ಯನವರು, ತಂದೆ ಮೂಕಚಂಡ ಎಸ್.ತಿಮ್ಮಯ್ಯ ಹಾಗೂ ತಾಯಿ ಟಿ. ಮಾಚ್ಚಮ್ಮ ದಂಪತಿಯ ಪುತ್ರರಾಗಿದ್ದಾರೆ. ಪತ್ನಿ ಎಂ.ಎ. ತ್ರೀನಾ ವಿರಾಜಪೇಟೆಯ ಕಾವೇರಿ ಕಾಲೇಜಿನ ಅಡ್ಮಿನ್‌ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಗ ಮಯಾನ್‌ ಮುತ್ತಣ್ಣ ಹಾಗೂ ಮಗಳು ನಕ್ಷಾ ನೀಲಮ್ಮ ವಿದ್ಯಾರ್ಥಿಗಳಾಗಿದ್ದು ವ್ಯಾಸಂಗ ನಿರತರಾಗಿದ್ದಾರೆ.

ಮೂಲತಃ ಕೃಷಿಕರು ಹಾಗೂ ಖಾಸಗಿ ಗುತ್ತಿಗೆದಾರರಾಗಿರುವ ಮೂಕಚಂಡ ಟಿ. ಪ್ರಸನ್ನ ಸುಬ್ಬಯ್ಯನವರು ಪ್ರಸ್ತುತ ಬಿಟ್ಟಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ  ಕಂಡಂಗಾಲ ಗ್ರಾಮದಲ್ಲಿ ಕುಟುಂಬ ಸಮೇತ ನೆಲೆಸಿದ್ದಾರೆ. ಇವರ ಸಹಕಾರ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಸೇವೆಯು ಹೀಗೆ ನಿರಂತರವಾಗಿ ಮುಂದುವರೆಯಲಿ ಎಂದು “ಸರ್ಚ್‌ ಕೂರ್ಗ್ ಮೀಡಿಯಾ” ವು  ಹಾರೈಸುತ್ತದೆ.

ಸಂದರ್ಶನ ದಿನಾಂಕ: 05-01-2024

Search Coorg Media

Coorg’s Largest Online Media Network

“ಸರ್ಚ್‌ ಕೂರ್ಗ್‌ ಮೀಡಿಯಾ”
ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ.
ಹಂಚಿಕೊಳ್ಳಿ
error: Content is protected !!